ತಿಪಟೂರು ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ‌ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಬಸ್, ತುಮಕೂರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಗಂಭೀರ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!