ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ್‌ನಲ್ಲಿ ಇಬ್ಬರು ವ್ಯಕ್ತಿಗಳು ಕುದುರೆಗೆ ಬಲವಂತವಾಗಿ ಗಾಂಜಾ ಕುಡಿಸುತ್ತಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ.
ಕೇದಾರನಾಥ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ಕುದುರೆಗೆ ಬಲವಂತವಾಗಿ ಗಾಂಜಾ ಸಿಗರೇಟ್ ಸೇದುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿಮಾಂಶಿ ಮೆಹ್ರಾ ಅವರ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ವೀಡಿಯೊವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರವಾಸಿಗರು ಈ ಪ್ರದೇಶದಲ್ಲಿ ನಡೆಯುತ್ತಿರುವ ಈ ರೀತಿಯ ಪ್ರಾಣಿ ಹಿಂಸೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಕುರಿತು ಉತ್ತರಾಖಂಡ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಕುದುರೆಗೆ ಬಲವಂತವಾಗಿ ಗಾಂಜಾ ಕುಡಿಸುತ್ತಿರುವ ವೀಡಿಯೋವನ್ನು ನೋಡಿದ್ದೇವೆ ಮತ್ತು ವಿಡಿಯೋದಲ್ಲಿರುವ ಜನರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು. ಇಂತಹ ಘಟನೆಗಳು ಕಂಡುಬಂದಲ್ಲಿ ಪೊಲೀಸ್ ತುರ್ತು ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ವೀಡಿಯೋ ನೋಡಿದವರೆಲ್ಲರೂ ಪ್ರಾಣಿ ಹಿಂಸೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.