ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯಿಂದಾಗಿ ಒಡಿಶಾದ ಮಹಾನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿ, ನೀರು ರಸ್ತೆಗೆ ನುಗ್ಗಿದೆ. ಮೇಲ್ಸೇತುವೆಯ ಮೂಲಕ ಹಾದು ಹೋಗುತ್ತಿದ್ದ ಕಾರು ದಾರಿ ಕಾಣದೆ ನೀರಿನಲ್ಲಿ ಸಿಲುಕಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿದ ಕೂಡಲೇ ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಪ್ರವಾಹದ ನೀರಿನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಇಬ್ಬರನ್ನು ಧೀರಂಕಿಯಾ ಗ್ರಾಮದ ರಶ್ಮಿ ರಂಜನ್ ಸ್ವೈನ್ ಮತ್ತು ಕೇಂದ್ರಪಾರ ಜಿಲ್ಲೆಯ ಪಟ್ಕುರಾ ಗ್ರಾಮದ ಪ್ರಶಾಂತ್ ಮೊಹಂತಿ ಎಂದು ಗುರುತಿಸಲಾಗಿದೆ.
ಕಾರು ಮರಕ್ಕೆ ಸಿಲುಕಿಕೊಂಡಿದ್ದರಿಂದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತತ ಎರಡು ಗಂಟೆಗಳ ಬಳಿಕ ಸಿಲುಕಿಕೊಂಡವರನ್ನು ರಕ್ಷಿಸುವಲ್ಲಿ ಎಸ್‌ಡಿಆರ್‌ಎಫ್ ಯಶಸ್ವಿಯಾಯಿತು.