Tuesday, October 3, 2023

Latest Posts

ಅನಂತನಾಗ್ ಜಿಲ್ಲೆಯಲ್ಲಿ ಮುಂದುವರಿದ ಉಗ್ರರ ಉಪಟಳ: ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಉಪಟಳ ಮುಂದುವರಿದಿದ್ದು, ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಿದ ಉಗ್ರರಿಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯ ಗಗ್ರೆನ್ ಪ್ರದೇಶದಲ್ಲಿ ಕಳೆದ ಗುರುವಾರ ಮೂವರು ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಲನವಲನಗಳ ನಂತರ ಭದ್ರತಾ ಪಡೆಗಳು ಭಯೋತ್ಪಾದಕರ ಹುಡುಕಾಟದಲ್ಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!