Monday, October 6, 2025

ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ವಲಸೆ ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾರ್ಥ ಕಾಲೋನಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ಅಪಾರ ಪ್ರಮಾಣದ ಮಣ್ಣು ಕುಸಿದು ಜಾರ್ಖಂಡ್ ಮೂಲಕ ಇಬ್ಬರು ವಲಸೆ ಕಾರ್ಮಿಕರು ಸಾವಿಗೀಡಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಮಂಗಳವಾರ ಸಂಜೆ ಅಡಿಪಾಯಕ್ಕಾಗಿ 20 ಅಡಿ ಆಳದ ಗುಂಡಿ ತೆಗೆಯುತ್ತಿದ್ದಾಗ ಹಠಾತ್ತನೆ ಮಣ್ಣು ಕುಸಿದಿದೆ. ಅವರಲ್ಲಿ ಮೂವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮಣ್ಣಿನ ಅಡಿ ಸಿಲುಕ್ಕಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತರನ್ನು ಲಾಲ್ ಮುದ್ದೀನ್ (33) ಮತ್ತು ರಜಾವುದ್ದೀನ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೈಫುಲ್ಲಾ (28) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಂಗಳವಾರ ಸಂಜೆ 7.30ರ ಸುಮಾರಿಗೆ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದಿದೆ ಮತ್ತು ಕೆಲಸ ಮಾಡುತ್ತಿದ್ದ ಕೆಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಮಗೆ ದೂರು ಬಂತು. ನಾವು ಬಂದು ಪರಿಶೀಲಿಸಿದಾಗ, ಮೂವರು ಸಿಲುಕಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.