ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ