Thursday, June 30, 2022

Latest Posts

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ: ಯಾವ್ಯಾವ ಭಾಗದಲ್ಲಿ ನೋಡಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇನ್ನೂ ಎರಡು ದಿನ ಮತ್ತೆ ಮಳೆಯಾಗುವ ಸಂಭವ ಇದೆ.
ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಆಗಾಗ ಜಿಟಿಜಿಟಿ ಮಳೆಯೂ ಕಾಣಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ಎರಡು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಗದಗ, ಹಾವೇರಿ, ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ಉಡುಪಿ, ಬೆಳಗಾವಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss