August 10, 2026
Monday, August 10, 2026
spot_img

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೆರಡು ಪದಕ: ದಿಲೀಪ್‌ಗೆ ಚಿನ್ನ, ಶ್ರೀಶಂಕರ್‌ಗೆ 2ನೇ ರಜತ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತದ ಖಾತೆಗೆ ಮತ್ತೆರಡು ಪದಕಗಳು ಆಗಮಿಸಿವೆ.

ಪುರುಷರ ಟಿ47 ವಿಭಾಗದ 100 ಮೀಟರ್ ಓಟ ಸ್ಪರ್ಧೆಯಲ್ಲಿ ಮೊದಲೆರಡು ಸ್ಥಾನಗಳನ್ನ ತನ್ನದಾಗಿಸಿಕೊಂಡಿದೆ. ದಿಲೀಪ್‌ ಮಹದೂ ಗಾವಿತ್ ಅಗ್ರಸ್ಥಾನ ಪಡೆಯುವ ಮೂಲಕ ಚಿನ್ನ ಗೆದ್ದರೆ, ಮೊಹಮ್ಮದ್ ಬಸಿಲ್ 2ನೇ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ದಿಲೀಪ್ ಅವರು 10.71 ಸೆಕೆಂಡುಗಳಲ್ಲಿ ಗುರಿ ತಲುಪಿ ಅಗ್ರಸ್ಥಾನಕ್ಕೇರಿದ್ರೆ, ಮೊಹಮ್ಮದ್ ಬಸಿಲ್ 10.83 ಸೆಕೆಂಡುಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾದರು. ಇಂಗ್ಲೆಂಡ್‌ನ ಕೆವಿನ್ ಸ್ಯಾಂಟೋಸ್ 10.85 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನೂ ಕಾಮನ್‌ವೆಲ್ತ್ ಗೇಮ್ಸ್‌ನ ಲಾಂಗ್ ಜಂಪ್‌ ಸ್ಪರ್ಧೆಯಲ್ಲಿ 28 ವರ್ಷದ ಮುರಳಿ ಶ್ರೀಶಂಕರ್ 8.09 ಮೀಟರ್ ದೂರ ಜಿಗಿಯುವ ಮೂಲಕ ಸತತ 2ನೇ ಬಾರಿಗೆ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು. ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಸತತ ಎರಡು ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಶ್ರೀಶಂಕ‌ರ್ ಪಾತ್ರರಾದರು. 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿಯೂ ಬೆಳ್ಳಿ ಗೆದ್ದಿದ್ದರು. ಈಗ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಭಾರತದ ಪದಕಗಳ ಸಂಖ್ಯೆ ಒಟ್ಟು 15ಕ್ಕೆ ಏರಿಕೆಯಾಗಿದ್ದು, ಪದಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !