ಕಾಶ್ಮೀರದಲ್ಲಿ ಎರಡೆರಡು ನಿಗೂಢ ಬಾಂಬ್ ಸ್ಫೋಟ: ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಶ್ಮಿರದಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಮುಂಜಾನೆಯ ನಡುವೆ 8 ಗಂಟೆಗಳ ಅಂತರದಲ್ಲಿ ಎರಡು ನಿಗೂಢ ಬಾಂಬ್‌ ಸ್ಫೋಟ ಪ್ರಕರಣಗಳು ವರದಿಯಾಗಿವೆ. ಬುಧವಾರ ರಾತ್ರಿ 10:45 ರ ಸುಮಾರಿಗೆ ಡೊಮೈಲ್ ಚೌಕ್‌ನಲ್ಲಿ ಬಸ್‌ನಲ್ಲಿ ಸ್ಪೋಟ ಸಂಭವಿಸಿದ್ದು ಈ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.

ಈ ಪ್ರಕರಣ ನಡೆದ 8 ಗಂಟೆಗಳ ಅಂತರದಲ್ಲಿ ಇದೇ ರೀತಿಯ ಇನ್ನೊಂದು ಸ್ಫೋಟ ಸಂಭವಿಸಿದ್ದು ಕಾಶ್ಮೀರದ ಉಧಂಪುರ ಜಿಲ್ಲೆಯ ಹಳೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್‌ನಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. J&K ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾತ್ರಿ ಸ್ಫೋಟಗೊಂಡ ಸ್ಥಳದಿಂದ ಕೇವಲ 4 ಕಿಮೀ ದೂರದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು 10:30 ರ ಸುಮಾರಿಗೆ ಸ್ಫೋಟ ಸಂಭವಿಸಿದಾಗ ಖಾಲಿ ಬಸ್ ಡೊಮೈಲ್ ಚೌಕ್‌ನ ಪೆಟ್ರೋಲ್ ಪಂಪ್‌ನ ಬಳಿ ತನ್ನ ದಿನನಿತ್ಯದ ಸೇವೆಯ ನಂತರ ನಿಂತಿತ್ತು ಎಂದು ಮೂಲಗಳು ವರದಿ ಮಾಡಿವೆ. ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!