February 20, 2026
Friday, February 20, 2026
spot_img

ಮತದಾರರ ಪಟ್ಟಿಯಲ್ಲಿ ಎರಡು ಹೆಸರು: ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪತ್ನಿಗೆ ಚುನಾವಣಾ ಆಯೋಗ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರ ಪತ್ನಿ ಕೆ. ನೀಲಿಮಾ ಕೂಡ ಎರಡು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗುರುವಾರ ನೊಟೀಸ್ ನೀಡಿದೆ.

ದೆಹಲಿಯ ಜಂಗ್‌ಪುರ ಮತ್ತು ದೆಹಲಿ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಪವನ್ ಖೇರಾ ಎರಡು ವೋಟರ್ ಐಡಿ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ(BJP) ಆರೋಪಿಸಿದ ನಂತರ ಚುನಾವಣಾ ಆಯೋಗವು ಅವರಿಗೆ ನೊಟೀಸ್ ನೀಡಿತ್ತು. ಇದಾದ ಎರಡು ದಿನಗಳ ಬಳಿಕ ಇದೀಗ ಅವರ ಪತ್ನಿ ಕೆ. ನೀಲಿಮಾ ಅವರಿಗೂ ನೊಟೀಸ್ ನೀಡಿದೆ.

ತೆಲಂಗಾಣದ ಖೈರ್ತಾಬಾದ್‌ನಲ್ಲಿಯೂ ಪವನ್ ಖೇರಾ ಅವರ ಪತ್ನಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ನೊಟೀಸ್ ನಲ್ಲಿ ಉಲ್ಲೇಖಿಸಲಾಗಿದ್ದು, ಇದಕ್ಕೆ ಉತ್ತರಿಸಲು ಸೆಪ್ಟೆಂಬರ್ 10ರವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.

ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಒಂದಕ್ಕಿಂತ ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನೋಂದಾಯಿಸುವುದು ಜನತಾ ಪ್ರಾತಿನಿಧ್ಯ ಕಾಯ್ದೆ1950 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ, ನಿಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು ಎಂಬುದಕ್ಕೆ ಕಾರಣ ತಿಳಿಸುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !