ಸುಪ್ರೀಂ ಕೋರ್ಟ್ : ಇಬ್ಬರು ಹೊಸ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ 2 ನ್ಯಾಯಾಧೀಶರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸೋಮವಾರ ಇಬ್ಬರು ನೂತನ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡುವ ಪ್ರತಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಸೋಮವಾರ ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ನೂತನ ನ್ಯಾಯಮೂರ್ತಿಗಳನ್ನು ಪದಗ್ರಹಣ ಮಾಡಲಾಯಿತು.

ಶುಕ್ರವಾರದಂದು ಕಾನೂನು ಸಚಿವ ಕಿರಣ್ ರಿಜಿಜು ಅವರು ಟ್ವಿಟರ್‌ ನಲ್ಲಿ ಉನ್ನತ ನ್ಯಾಯಾಲಯಕ್ಕೆ ಹೊಸ ನೇಮಕಾತಿಗಳನ್ನು ಮಾಡಿರುವುದಾಗಿ ಘೋಷಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!