ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೊದಲ ಬಾರಿಗೆ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ರೈಲ್ವೆ ಹಳಿ ದಾಟುವಂತೆ ಮಟ್ರೋ ಟ್ರ್ಯಾಕ್ ದಾಟಲು ಮುಂದಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಳ್ಳಿಯಿಂದ ಬಂದ ಇಬ್ಬರು ವ್ಯಕ್ತಿಗಳು ಮೊದಲ ಬಾರಿಗೆ ಮೆಟ್ರೋ ಬಳಸುತ್ತಿದ್ದ ಹಿನ್ನೆಲೆಯಲ್ಲಿ ಮೆಟ್ರೋ ರೈಲ್ವೆ ಹಳಿ ದಾಟಲು ಮುಂದಾಗಿದ್ದಾರೆ. ಅದನ್ನು ಗಮನಿಸಿದ ಭದ್ರತಾ ಸಿಬ್ಬಂದಿಯು ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕಕ್ಷಿಸಿದ್ದಾರೆ. ಈ ಕಾರಣಕ್ಕೆ ನಮ್ಮ ಮೆಟ್ರೋದ ಗ್ರೀನ್ ಲೈನ್‌ನಲ್ಲಿ ಒಂದೆರಡು ರೈಲುಗಳು ಸುಮಾರು 10 ನಿಮಿಷಗಳ ಕಾಲ ವಿಳಂಬಗೊಂಡವು.