ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ವರು ಮಕ್ಕಳು ಆಟವಾಡುತ್ತಿದ್ದ ವೇಳೆ ಅಣೆಕಟ್ಟೆಯ ಒಂದು ಬದಿ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪ್ರಶಾಂತ ಪ್ರದೇಶದ ಉರಾನ್ ತಾಲೂಕಿನ ಧುತಂ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಮಕ್ಕಳನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.