ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್ ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ.
ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್ ಎಂಬವರು ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಬೈಕ್ ಅಪಘಾತವಾಗಿದೆ. ಮೃತರ ಕುಟುಂಬದ ಆಘಾತದಲ್ಲಿದ್ದು, ಕಣ್ಣೀರು ಮುಗಿಲುಮುಟ್ಟಿದೆ.