ಬಸ್‌ ಸ್ಟಾಂಡಿನಲ್ಲಿ ಗಾಂಜಾ ಮಾರಾಟ: ಉತ್ತರಪ್ರದೇಶ ಮೂಲದ ಇಬ್ಬರ ಬಂಧನ

ಹೊಸದಿಗಂತ ವರದಿ ಕುಶಾಲನಗರ:

ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಖಾಸಗಿ ಬಸ್‌ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ತಮವಾಗಿ ಮಾರಾಟ/ಸರಬರಾಜು ಮಾಡುತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಉತ್ತರಪ್ರದೇಶದ ಬುಲಂದಶಹರ್ ಜಿಲ್ಲೆಯ ಬೆಡ್‌ಶೀಟ್ ವ್ಯಾಪಾರಿಗಳಾದ ಮೊಹಮ್ಮದ್
ಆಲಂ(32) ಮೋನು (26) ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ 550 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಕುಶಾಲನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ/ಸರಬರಾಜು ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ಟೌನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಕಾಶ್.ಬಿ.ಜಿ, ಪಿಎಸ್ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!