ಮಧ್ಯರಾತ್ರಿ ದೆಹಲಿಯಲ್ಲಿ ತುಪಾಕಿ ಸದ್ದು: ಇಬ್ಬರ ಸಾವು, ಓರ್ವನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಧ್ಯರಾತ್ರಿ ಗುಂಡಿನ ದಾಳಿ ನಡೆದಿದೆ. ಜೆಜೆ ಕಾಲೋನಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, ಅಪರಿಚಿತ ವ್ಯಕ್ತಿಗಳು ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಅಪರಿಚಿತ ವ್ಯಕ್ತಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ.

ಏಕಾಏಕಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಟಿವಿ ನೋಡುತ್ತಿದ್ದ ಮೂವರ ಮೇಲೆ ಗುಂಡು ಹಾರಿಸಿದ್ದಾರೆ. ಸ್ಥಳದಲ್ಲಿ ಇಬ್ಬರ ಪ್ರಾಣ ಪಕ್ಷಿ ಹಾರಿ ಹೋಗಿದೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪೊಲೀಸರು ಆರೋಪಿಗಳ ಶೋಧಕಾರ್ಯ ನಡೆಸುತ್ತಿದ್ದಾರೆ. ಗುಂಡಿನ ದಾಳಿ ಏಕೆ ನಡೆದಿದೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಮೃತರು ತಾಔಆಯಿತು ತಮ್ಮ ಕೆಲಸವಾಯಿತು ಎಂಬಂತೆ ಇದ್ದವರು ಯಾರೊಂದಿಗೂ ಇದುವರೆಗೂ ಜಗಳವಾಡಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!