Sunday, December 10, 2023

Latest Posts

ಬೈಕ್‌ಗೆ ಮತ್ತೊಂದು ಬೈಕ್‌ ಡಿಕ್ಕಿ: ಇಬ್ಬರು ಸವಾರರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಕೋಟಬಂಡೆ ಗ್ರಾಮದ ಈಶ್ವರಪ್ಪ (36) ಹಾಗೂ ನಾಗರಾಜು (42) ಮೃತ ದುರ್ದೈವಿಗಳು.

ಈ ಘಟನೆಯಲ್ಲಿ ಚಿಕ್ಕತಿಮ್ಮನಹಟ್ಟಿ ಗ್ರಾಮದ ದರ್ಶನ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರಸಂಧ್ರ ಮಾರಮ್ಮ ಜಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!