ಹೊಸದಿಗಂತ ವರದಿ, ಕೊಡಗು:
ಕೆಪಿಸಿಸಿ ಪ್ಯಾನಲಿಸ್ಟ್ ಕೊಡಗು ಜಿಲ್ಲೆಯ ಇಬ್ಬರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೇಕಲ್ ಎಸ್.ರಮಾನಾಥ್ ಅವರನ್ನು ಕೆಪಿಸಿಸಿ ಪ್ಯಾನಲಿಸ್ಟ್ ಆಗಿ ನೇಮಿಸಲಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ದೃಶ್ಯ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ವವಹಿಸುತ್ತಿವೆ.
ಮಾಧ್ಯಮಗಳಲ್ಲಿ ಪಕ್ಷದ ವಿಚಾರ ಮತ್ತು ದೃಷ್ಟಿಕೋನವನ್ನು ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅತ್ಯಂತ ಅವಶ್ಯಕವಾಗಿರುವುದರಿಂದ ತಮ್ಮ ಅನುಭವ ಹಾಗೂ ತಿಳುವಳಿಕೆಯನ್ನು ಉಪಯೋಗಿಸಿಕೊಂಡು ಈ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಕೆಪಿಸಿಸಿ ಅಧ್ಯಕ್ಷರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.