ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು ಐದು ಮಂದಿಯ ದಾರುಣವಾಗಿ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ಮೃತರನ್ನು ಸೂರಜ್ (27) ಹಾಗೂ ಕಮಲ್ (26) ಗುರುತಿಸಲಾಗಿದ್ದು ಉತ್ತರ ಪ್ರದೇಶದ ಖಾನಾಪುರ್ ನಿವಾಸಿಗಳು ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಜೈಸಿಂಗ್, ಯು ಜೈಸಿಂಗ್ ಅವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ಇಬ್ಬರಿಗೆ ಹಿಂದೂಪೂರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.