ಎರಡು ಪ್ರತ್ಯೇಕ ಪ್ರಕರಣ: ರೈಲಿಗೆ ಸಿಲುಕಿ ಸ್ಟಾಫ್ ನರ್ಸ್, ವೈದ್ಯ ಆತ್ಮಹತ್ಯೆ

ಹೊಸದಿಗಂತ ವರದಿ,ಬೆಂಗಳೂರು:

ನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಟಾಫ್ ನರ್ಸ್ ಹಾಗೂ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ದೀಪಾಂಜಲಿನಗರದ ರೈಲ್ವೆ ಸೇತುವೆ ಬಳಿ ವಿಜಯಪುರ ಜಿಲ್ಲೆ ಮೂಲದ ಸ್ಟಾಫ್ ನರ್ಸ್ ಆಗಿರುವ ವಿಜಯಪುರ ಜಿಲ್ಲೆ ಕಾರಜೋಳ ಗ್ರಾಮದ ಚನ್ನಬಸು ಅಶೋಕ್(೨೨) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬುಧವಾರ ಸಂಜೆ ಯಾವುದೋ ರೈಲಿಗೆ ಸಿಲುಕಿ ಚನ್ನಬಸು ಆತ್ಮಹತ್ಯೆ ಮಾಡಿಕೊಂಡಿದ್ದು, ಗುರವಾರ ಬೆಳಗ್ಗೆ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಭೇಟಿ ನೀಡಿ ಪೊಲೀಸರು ಪರಿಶೀಲಿಸಿದಾಗ ಆತನ ಬ್ಯಾಗ್‌ನಲ್ಲಿದ್ದ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್‌ನಿಂದ ಆತನ ಗುರುತು ಪತ್ತೆಯಾಗಿದೆ ಎಂದು ಮೆಜೆಸ್ಟಿಕ್ ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಅಶೋಕ್, ಇತ್ತೀಚೆಗೆ ಕೆ.ಆರ್.ಪುರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಾಫ್‌ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ೧೫ ದಿನಗಳ ಹಿಂದೆಯಷ್ಟೇ ನಗರಕ್ಕೆ ಬಂದು ಮಾಗಡಿ ರಸ್ತೆಯಲ್ಲಿನ ಚೋಳರಪಾಳ್ಯದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ. ಬು‘ವಾರ ಕೆಲಸಕ್ಕೆ ಹೋಗುವಾಗ ನಾನು ಸ್ನೇಹಿತರ ಭೇಟಿಗೆ ಹೋಗುತ್ತೇನೆ. ಹಾಗಾಗಿ ಮನೆಗೆ ಬರುವುದಿಲ್ಲ ಎಂದು ಚಿಕ್ಕಮ್ಮನಿಗೆ ತಿಳಿಸಿದ್ದನು.

ತಡರಾತ್ರಿಯಾದರೂ ಮನೆಗೆ ಅಶೋಕ್ ಬರದಿದ್ದರಿಂದ ಅನುಮಾನಗೊಂಡು ಆತನ ಚಿಕ್ಕಮ್ಮನ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು. ಗುರುವಾರ ಬೆಳಗ್ಗೆ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾದ ನಂತರ ಆತನ ಚಿಕ್ಕಮ್ಮನಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.

ವೈದ್ಯ ಆತ್ಮಹತ್ಯೆ
ಮತ್ತೊಂದು ಪ್ರಕರಣದಲ್ಲಿ ಯಲಹಂಕ ರೈಲು ನಿಲ್ದಾಣ ಸಮೀಪದ ರೈಲ್ವೆ ಹಳಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಡಾ. ಅನಂತ್ ಪ್ರಸಾದ್ ಎಂಬ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದಲ್ಲಿದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಕ್ಕಳ ವೈದ್ಯರಾಗಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ನಗರದ ಹೆಬ್ಬಾಳದ ಸಮೀಪದ ಕೆಂಪಾಪುರದಲ್ಲಿ ವಾಸವಿದ್ದರು. ಬುಧವಾರ ಸಂಜೆ ಯಾವುದೋ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಯಶವಂತಪುರ ರೈಲ್ವೆ ಪೊಲೀಸರು ಪರಿಶೀಲಿಸಿದ್ದಾರೆ. ಆ ವೇಳೆ ಅನಂತ್ ಅವರ ಪ್ಯಾಮಟ್ ಜೇಬಿನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವ ಪತ್ರವೊಂದು ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!