ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕನಿಷ್ಠ 22 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜಾಪುರ ಜಿಲ್ಲೆಯಲ್ಲಿ 18 ಮಾವೋವಾದಿಗಳು ಸಾವನ್ನಪ್ಪಿದ್ದರೆ, ಕಂಕೇರ್ ಪ್ರದೇಶಗಳಲ್ಲಿ ನಾಲ್ವರು ರಾಜ್ಯ ಪೊಲೀಸರ ಬಿಎಸ್‌ಎಫ್ ಮತ್ತು ಡಿಆರ್‌ಜಿ ಸಿಬ್ಬಂದಿಯ ಜಂಟಿ ತಂಡ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಂಟಿ ತಂಡವನ್ನು ನಿಯೋಜಿಸಲಾಗಿತ್ತು. ಈ ಪ್ರದೇಶದಲ್ಲಿ ಹೆಚ್ಚಿನ ಶವಗಳನ್ನು ಹುಡುಕಲು ಘರ್ಷಣೆಗಳು ಮತ್ತು ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಮಾವೋವಾದಿಗಳ ಮೃತದೇಹಗಳ ಜೊತೆಗೆ, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದೊಡ್ಡ ಸಂಗ್ರಹವೂ ಪತ್ತೆಯಾಗಿದೆ.