ಎರಡು ಪ್ರತ್ಯೇಕ ರಸ್ತೆ ಅವಘಡ- ಬೈಕ್ ಸವಾರರಿಬ್ಬರ ಸಾವು

ಹೊಸದಿಗಂತ ವರದಿ ಮಡಿಕೇರಿ:
ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅವಘಡದಲ್ಲಿ ಶಿಕ್ಷಕಿಯೊಬ್ಬರು ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ.
ಹುಕುಸೆ ಬಳಿ ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ನೇರುಗಳಲೆ ಸರಕಾರಿ ಶಾಲಾ ಶಿಕ್ಷಕಿ ಎ ಅಶ್ವಿನಿ(45) ಎಂಬವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಮತ್ತೊಂದೆಡೆ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಚೆಟ್ಟಳ್ಳಿ ಸಮೀಪದ ಪೊನ್ನತ್’ ಮೊಟ್ಟೆ ನಿವಾಸಿ ಅಶ್ರಫ್ (40) ಎಂಬವರು ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!