Monday, November 3, 2025

ಜಮ್ಮು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಇಬ್ಬರು ಸೈನಿಕರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಇಬ್ಬರು ಸೈನಿಕರು ದಟ್ಟ ಕಾಡಿನಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕೊಕರ್ನಾಗ್‌ನ ಗಡೋಲ್ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಇಬ್ಬರು ಸೈನಿಕರು ತಮ್ಮ ಪಡೆಯೊಂದಿಗಿನ ಸಂಪರ್ಕ ಕಳೆದುಕೊಂಡ ನಂತರ ನಾಪತ್ತೆಯಾಗಿದ್ದಾರೆ. 2 ದಿನಗಳ ಹಿಂದೆ ಸೈನಿಕರೊಂದಿಗಿನ ಸಂಪರ್ಕ ಕಡಿತಗೊಂಡಿದ್ದು, ಕೆಟ್ಟ ಹವಾಮಾನ ಮತ್ತು ಹಿಮಪಾತವು ಅವರ ಪತ್ತೆ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸೈನಿಕರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಇಲ್ಲಿಯವರೆಗೆ ಇಬ್ಬರು ಸೈನಿಕರ ನಾಪತ್ತೆಯ ಹಿಂದೆ ಭಯೋತ್ಪಾದಕರ ಕೈವಾಡವಿದೆ ಎಂಬುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

error: Content is protected !!