ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕು ಇರಿತ: ಪರಿಸ್ಥಿತಿ ಉದ್ವಿಘ್ನ, ಸೆಕ್ಷನ್ 144 ಜಾರಿ

ಹೊಸದಿಗಂತ ವರದಿ,ಶಿವಮೊಗ್ಗ:

ಒಂದೆಡೆ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷಾಚರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಿಡಿಗೇಡಿಗಳ ದುಷ್ಕೃತ್ಯದಿಂದಾಗಿ ನಗರದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣಗೊಂಡಿದೆ. ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರದಲ್ಲಿ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.
ಸಾವರ್ಕರ್ ಫೋಟೋ ಕಿತ್ತ ಕಿಡಿಗೇಡಿಗಳು
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಇರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಭಾವಚಿತ್ರದ ಫ್ಲೆಕ್ಸ್ ಅಳವಡಿಸಲಾಗಿತ್ತು. ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಕ್ತಾಯವಾದ ತರುವಾಯ ಕೆಲ ಮುಸ್ಲಿಂ ಯುವಕರು ಅಮೀರ್ ಅಹ್ಮದ್ ವೃತ್ತದಲ್ಲಿ ಅಳವಡಿಸಿದ್ದ ವೀರ ಸಾವರ್ಕರ್ ಫ್ಲೆಕ್ಸ್‌ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅದೇ ಸ್ಥಳದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರದ ಫ್ಲೆಕ್ಸ್ ಅಳವಡಿಕೆಗೆ ಮುಂದಾಗಿದ್ದಾರೆ.
ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಅಮೀರ್ ಅಹ್ಮದ್ ವೃತ್ತವನ್ನು ಸುತ್ತುವರೆದರು. ಇದೇ ವೇಳೆಗೆ ಕಿಡಿಗೇಡಿಗಳು ಫ್ಲೆಕ್ಸ್ ತೆರವಿಗೆ ಕೈ ಹಾಕಿದರು. ಫ್ಲೆಕ್ಸ್ ಮೇಲೆ ಅಳವಡಿಸಿದ್ದ ರಾಷ್ಟ್ರಧ್ವಜವನ್ನು ಕೂಡ ಕೆಳಕ್ಕೆ ಬೀಳಿಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು. ಜೊತೆಗೆ 10 ಮಂದಿ ಯುವಕರನ್ನು ವಶಕ್ಕೆ ಪಡೆದುಕೊಂಡರು. ಜೊತೆಗೆ ಸ್ಥಳದಲ್ಲಿದ್ದ ಫ್ಲೆಕ್ಸ್ ತೆರವು ಮಾಡಿದರು.
ಬಳಿಕ ಪೊಲೀಸರು ಅಲ್ಲಿದ್ದ ಧ್ವಜ ಹಾರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!