ದೆಹಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದುಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಕಬೀರ್‌ ನಗರದಲ್ಲಿರುವ ಹಳೆ ಕಟ್ಟಡ ಇದಾಗಿದ್ದು, ಮಧ್ಯರಾತ್ರಿ ಕುಸಿತವಾಗಿದೆ. ಹಳೆಯ ಕಟ್ಟಡದ ಒಳಗೆ ಮಲಗಿದ್ದ ಮೂವರು ಅವಶೇಷಗಳಡಿ ಸಿಲುಕಿದ್ದಾರೆ.

ಅಕ್ಕಪಕ್ಕದವರು ರಕ್ಷಣಾ ಸೇವೆಗಳಿಗೆ ಮಧ್ಯರಾತ್ರಿ ಎರಡು ಗಂಟೆ ವೇಳೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮೂವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಇಬ್ಬರು ಕಾಮಿಕರು ಮೃತಪಟ್ಟಿದ್ದಾರೆ. ಮತ್ತೊಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಅರ್ಷದ್‌ ಹಾಗೂ ತೌಹಿದ್‌ ಮೃತರು, ರೆಹಮಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡ ಮಾಲೀಕನ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!