ತೆಲಂಗಾಣದಲ್ಲಿ ಎರಡಂತಸ್ತಿನ ಕಟ್ಟಡ ಕುಸಿತ: ಸ್ಥಳದಲ್ಲೇ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೆಲಂಗಾಣದ ಯಾದಗಿರಿಗುಟ್ಟದಲ್ಲಿ ಎರಡಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾಗಿ ತಿಳಿದು ಬಂದಿದೆ.
ಕುಸಿತಗೊಂಡಿರುವ ಬಿಲ್ಡಿಂಗ್​​ನಲ್ಲಿ ಅನೇಕ ಅಂಗಡಿ, ಹಾಗೂ ಕುಟುಂಬಗಳು ವಾಸವಾಗಿದ್ದವು ಎಂದು ತಿಳಿದು ಬಂದಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗ್ತಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಭುವನಗಿರಿ ಏರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ 30 ವರ್ಷಗಳ ಹಿಂದೆ ಈ ಬಿಲ್ಡಿಂಗ್ ಕಟ್ಟಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!