ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಇಂದು ವರದಿಯಾಗಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು, ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರನ್ನು ಹಾಸನದ ಚಿರಂತ್ (22) ಹಾಗೂ ಬೀದರ್ ಮೂಲದ ಸುನೀಲ್ (22) ಎಂದು ಗುರುತಿಸಲಾಗಿದೆ. ಮೃತಪಟ್ಟ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಇಲವಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.