ಬೆಂಗಳೂರಿನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವಿದ್ಯಾರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆ ಗುರುವಾರ ನಡೆದಿದ್ದು, ಇದರ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಬ್ಬ ಹುಡುಗ ಮತ್ತು ಹುಡುಗಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆಗಳನ್ನು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ. ಆ ವೇಳೆ ಇತರ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪಿಸಿ, ಆ ರೀತಿ ಘೋಷಣೆ ಕೂಗದಂತೆ ಅವರನ್ನು ತಡೆಯಲು ಯತ್ನಿಸಿದ್ದಾರೆ. ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶುಕ್ರವಾರ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಹೇಳಿಕೆಯಲ್ಲಿ, ತಮಾಷೆಗಾಗಿ ಈ ಘೋಷಣೆಗಳನ್ನು ಕೂಗಿದ್ದು, ಭಾರತ ವಿರೋಧಿ ಭಾವನೆಗಳನ್ನು ವ್ಯಕ್ತಪಡಸುವುದು ನಮ್ಮ ಉದ್ದೇಶವಾಗಿರಲಿಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!