ಭಾರತ-ಪಾಕ್ ಸಂಘರ್ಷದ ನಡುವೆ ಇಬ್ಬರು ಶಂಕಿತ JMB ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ ವಿಶೇಷ ಕಾರ್ಯ ಪಡೆ ಪೊಲೀಸರುನಿಷೇಧಿತ ಜಮಾತುಲ್ಲಾ ಮುಜಾ ಹಿದ್ದೀನ್ ಬಾಂಗ್ಲಾದೇಶ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬಂಧಿತರನ್ನು ಅಜ್ಮೋಲ್ ಹೊಸೈನ್ ಮತ್ತು ಸಾಹೇಬ್ ಅಲಿ ಖಾನ್ ಎಂದು ಗುರುತಿಸಲಾಗಿದೆ. ಮೇ 8 ಮತ್ತು 9 ರ ಮಧ್ಯರಾತ್ರಿ ನಲ್ಹಾಟಿ ಮತ್ತು ಮುರಾರೈ ಪ್ರದೇಶಗಳಿಂದ ಬಂಧಿಸಲಾಯಿತು.

ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ.

ಬಂಧಿತರನ್ನು ರಾಮ್‌ಪುರಹಟ್‌ನ ಸಹಾಯಕ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!