ಹೊಸದಿಗಂತ ವರದಿ ಕಾಸರಗೋಡು:
ಜಿಲ್ಲೆಯ ಮಂಜೇಶ್ವರ ಮತ್ತು ಕಾಸರಗೋಡು ತಾಲೂಕುಗಳ ಎಲ್ಲಾ ಶಾಲೆಗಳಿಗೆ ಇಂದು (ಶುಕ್ರವಾರ) ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಕಾರಣ ಮಂಜೇಶ್ವರ ಹಾಗೂ ಕಾಸರಗೋಡು ತಾಲೂಕುಗಳ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಆದೇಶ ಹೊರಡಿಸಿದ್ದು, ಈ ರಜೆ ಕೇವಲ ಶಾಲೆಗಳಿಗೆ ಮಾತ್ರ ಕಾಲೇಜುಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.