ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಸಿಆರ್‌ಪಿಎಫ್ 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ.
ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು ಗುಂಡುಗಳು ಮತ್ತಿತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಶೋಪಿಯಾನ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಉಗ್ರರ ಸಹಚರರ ಸಂಪರ್ಕಗಳು ಮತ್ತು ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ತನಿಖೆ ನಡೆಸುತ್ತಿದ್ದಾರೆ.
ಉಗ್ರರ ಸಹಚರರ ಬಂಧನ ಈ ಭಾಗದಲ್ಲಿ ಕಾನೂನುಬಾಹಿರ ಮತ್ತು ವಿಧ್ವಂಸಕ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ಮೈಲಿಗಲ್ಲು ಎನ್ನಲಾಗುತ್ತಿದೆ. ರಾಷ್ಟ್ರೀಯ ಭದ್ರತೆಗೆ ಬೆದರಿಕೆ ತಟಸ್ಥಗೊಳಿಸಲು ಮತ್ತು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಶೋಪಿಯಾನ್ ಪೊಲೀಸರ ದಕ್ಷತೆಯನ್ನು ತೋರಿಸುತ್ತಿದೆ.