ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ .
ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಸಂಘಟನೆಯನ್ನು ಪತ್ತೆ ಮಾಡಲಾಗುತ್ತಿದೆ.