ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆ ಬುಧವಾರ ತಿಳಿಸಿದೆ.

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಪ್ರಾರಂಭಿಸಲಾಯಿತು, ಈ ವೇಳೆ ಒಳನುಸುಳುತ್ತಿದ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿರುವುದಾಗಿ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಟ್ವೀಟ್‌ ಮಾಡಿದೆ.

ಜೊತೆಗೆ 4 ಎಕೆ ರೈಫಲ್ಸ್, 6 ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಇತರ ಯುದ್ಧ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!