ಹೊಸದಿಗಂತ ಡಿಜಿಟಲ್ ಡೆಸ್ಕ್:
ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲು ಯೋಜನೆ ರೂಪಿಸಲಾಗಿದೆ. ಕರಾವಳಿ ಭಾಗದಲ್ಲಿ ಇರುವ ದೈವನರ್ತಕರ ಬಹುದಿನದ ಬೇಡಿಕೆ ಇದೀಗ ಈಡೇರಿದೆ. ದೈವನರ್ತಕರ ಕುಟುಂಬಕ್ಕೆ ಸರ್ಕಾರ ಆಶಾದಾಯಕ ನಿರ್ಧಾರ ತೆಗೆದುಕೊಂಡಿದ್ದು, ಇವರ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ.