ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆಮಹದೇಶನ ದರುಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಮಲೆಮಹದೇಶ್ವರ ಬೆಟ್ಟದಲ್ಲಿ ದ್ವಿಚಕ್ರ ವಾಹನ ಹಾಗೂ ಆಟೋಗಳಿಗೆ ನಿರ್ಬಂಧ ಹೇರಲಾಗಿದೆ.
ದೀಪಾವಳಿ ಜಾತ್ರಾ ಮಹೋತ್ಸವಕ್ಕಾಗಿ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಸಂಚಾರ ದಟ್ಟಣೆ ನಿರ್ವಹಿಸುವುದು ದೊಡ್ಡ ಸಮಸ್ಯೆಯಾಗಲಿದೆ. ಅಷ್ಟೇ ಅಲ್ಲದೆ ಅಪಘಾತಗಳು ಸಂಭವಿಸುವ ಸಾಧ್ಯತೆಯೂ ಇದೆ. ಈ ಎಲ್ಲ ಕಾರಣಗಳಿಂದ ದ್ವಿಚಕ್ರ ವಾಹನ ಹಾಗೂ ಆಟೋಗಳಿಗೆ ನಿರ್ಬಂಧ ಹೇರಲಾಗಿದೆ.
ದ್ವಿಚಕ್ರ ವಾಹನಗಳನ್ನು ತಾಳುಬೆಟ್ಟದಲ್ಲಿ ನಿಲ್ಲಿಸಿ ತೆರಳಬಹುದಾಗಿದೆ, ತಾಳುಬೆಟ್ಟದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.