ಹೊಸದಿಗಂತ ವರದಿ ಮಡಿಕೇರಿ:
ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಕಾರಿನಲ್ಲಿದ್ದ ಪ್ರವಾಸಿಗರ ಮೊಬೈಲ್’ನಲ್ಲಿ ಸೆರೆಯಾಗಿದೆ.
ಮೃತರನ್ನು ಮಡಿಕೇರಿ ತಾಲೂಕಿನ ಮದೆನಾಡು ನಿವಾಸಿ ಬಿ.ಎಸ್.ಧನಂಜಯ (53) ಎಂದು ಗುರುತಿಸಲಾಗಿದೆ.
ನಗರದ ಮೈಸೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಇವರು ಕಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ಇದೇ ಕಾರಿನಲ್ಲಿದ್ದ ಪ್ರವಾಸಿಗರು ಎದುರಿನ ರಸ್ತೆಯ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಸಾಗುತ್ತಿದ್ದರು. ಅದೇ ವೇಳೆಗೆ ಎದುರಿನ ತಿರುವಿನಲ್ಲಿ ವೇಗವಾಗಿ ಬಂದ ದ್ವಿಚಕ್ರವಾಹನ ಕಾರಿಗೆ ಅಪ್ಪಳಿಸಿದೆ. ಗಂಭೀರ ಗಾಯಗೊಂಡ ಧನಂಜಯ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.