ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನ ಟೈರ್ ಕಳಚಿ ಬಿದ್ದ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ವೃತ್ತದ ಬಳಿ ಬರುತ್ತಿದ್ದಂತೆ ಚಲಿಸುತ್ತಿದ್ದ ಬಸ್ನ ಟೈರ್ಗಳು ಏಕಾಏಕಿ ಬಿದ್ದಿವೆ. ಬಸ್ಸಿನ ಹಿಂಬದಿ ಚಕ್ರ ಕಳಚಿ ಬಿದ್ದಿದ್ದು, ಬಹುತೇಕ ಗಂಭೀರ ಅಪಘಾತ ಸಂಭವಿಸಿದೆ.
ಬಸ್ನ ಟೈರ್ಗಳು ಕಳಚಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಾಟಿ ಪ್ರದೇಶದಲ್ಲಿ ಘಟನೆ ನಡೆದಿದ್ದರೆ ಭಾರೀ ಅನಾಹುತವಾಗುತ್ತಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.