ಹೊಸದಿಗಂತ ವರದಿ,ಕೆ.ಆರ್.ಪೇಟೆ:
ತಾಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ವಯೋವೃದ್ದ ಮಹಿಳೆಯರು ಮೃತರಾಗಿದ್ದು 10 ಕ್ಕೂ ಹೆಚ್ಚು ಮಂದಿ ಹಾಸನದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಸಂಚಾರ ನಡೆಸಿ ಮನೆಮನೆಗೆ ಭೇಟಿ ನೀಡಿ ಆರೋಗ್ಯ ಕುಶಲೋಪರಿ ನಡೆಸಿದರು.
ತಾಲ್ಲೂಕು ಸಂತೆಬಾಚಹಳ್ಳಿ ಹೋಬಳಿಯ ಭಾರತಿಪುರ ಕ್ರಾಸ್ ಗ್ರಾ.ಪಂ ವ್ಯಾಪ್ತಿಗೆ ಬರುವ ಮಾರೇನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತೀವ್ರ ವಾಂತಿ ಭೇದಿಯಿಂದ ಇಬ್ಬರು ವಯೋವೃದ್ದರೂ ಮೃತಪಟ್ಟಿದ್ದು ಉಳಿದವರು ಹಾಸನ – ಚನ್ನರಾಯಪಟ್ಟಣ – ಶ್ರವಣಬೆಳಗೊಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು ಗ್ರಾಮಸ್ಥರು ಅಸ್ವಸ್ಥರಾಗಿ ಚಿಕಿತ್ಸೆ ಪಡೆದರು.
ಮಾರೇನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಇಂದು ಗ್ರಾಮಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು.