Saturday, November 8, 2025

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಕೆಲವರು ಗಾಯಗೊಂಡಿದ್ದಾರೆ’ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕರಂ ಸಿಂಗ್ ಹೇಳಿದ್ದಾರೆ.

ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಕನಿಷ್ಠ ಇಬ್ಬರು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

‘ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ’ ಎಂದು ಅಧಿಕಾರಿ ಹೇಳಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

error: Content is protected !!