spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತ್ರಿವಳಿ ತಲಾಖ್ ಕಾನೂನಿಗೆ ಎರಡು ವರ್ಷ: ಆಗಸ್ಟ್ 1ರಂದು ‘ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನ’ವನ್ನು ಆಚರಿಸಲಿದೆ ಕೇಂದ್ರ ಸರ್ಕಾರ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಯಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆ ನಾಳೆ, ಆಗಸ್ಟ್ 1ರಂದು ದೇಶದಾದ್ಯಂತ ‘ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನ’ವನ್ನು ಆಚರಿಸುವುದಾಗಿ ಕೇಂದ್ರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಮುಸ್ಲಿಂ ಮಹಿಳೆಯರಿಗೆ ಸಮಸ್ಯೆಯಾಗಿದ್ದ ತ್ರಿವಳಿ ತಲಾಖ್ ನಿಷೇಧಿಸಿ ಕಾನೂನು ರೂಪಿಸಿರುವುದು ಬಿಜೆಪಿಯ ಹೆಗ್ಗಳಿಕೆ ಎಂದು ವ್ಯಾಖ್ಯಾನಿಸಿದ್ದಾರೆ.
ಈ ಕಾನೂನು ಜಾತಿಯಾದ ನಂತರ ಮುಸ್ಲಿಂ ಮಹಿಳೆಯರು ಅನುಭವಿಸುತ್ತಿದ್ದ ಬಹುದೊಡ್ಡ ತೊಂದರೆಯೊಂದು ಪರಿಹಾರವಾದಂತಾಗಿದೆ. ಕಾನೂನು ಜಾರಿಗೊಳಿಸಿರುವುದನ್ನು ಅತ್ಯಂತ ಮುಕ್ತಕಂಠದಿಂದ ಮುಸ್ಲಿಂ ಮಹಿಳೆಯರು ಸ್ವಾಗತಿಸಿದ್ದಾರೆ. ಅಲ್ಲದೇ, ಕೇಂದ್ರ ಸರ್ಕಾರವನ್ನು ಕೊಂಡಾಡಿದ್ದಾರೆ ಎಂದು ಸಹ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದರು. ಭಾನುವಾರ ದೆಹಲಿಯಲ್ಲಿ ನಡೆಯಲಿರುವ ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ತಾರ್ ಅಬ್ಬಾಸ್ ನಖ್ವಿ ಅವರವ ಜತೆಗೆ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಪರಿಸರ ಸಚಿವ ಭೂಪೇಂದರ್ ಯಾದವ್ ಸಹ ಭಾಗವಹಿಸಲಿದ್ದಾರೆ.
ಮುಸ್ಲಿಂ ಮಹಿಳೆಯರಿಗೆ ತ್ರಿವಳಿ ತಲಾಖ್ ನೀಡುವುದು ಕಾನೂನು ಬಾಹಿರ ಎಂಬ ಕಾನೂನನ್ನು 2019ರ ಆಗಸ್ಟ್ 1ರಂದು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss