ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಯುವಕರಿಬ್ಬರು ಸ್ಥಳದಲ್ಲೇ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 100ರ ಗಡಿ ದಾಟಿದೆ. ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಫ್ಲೈಓವರ್ ಮೇಲೆ ನಡೆದಿದೆ.

ಮೃತರನ್ನು ಮಣಿ (25) ಮತ್ತು ಜನಾರ್ಧನ ಪೂಜಾರಿ (21) ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವಾರಾಂತ್ಯ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗ್ಗಿನ ಜಾವ ಈ ದರ್ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!