ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆದ್ದಾರಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಂಗಳೂರಿನ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದರಲ್ಲಿ ಎನ್‌ಎಸ್‌ಯುಐ ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಕಾರು ನಜ್ಜುಗುಜ್ಜಾಗಿದೆ. ಐವರು ಯುವಕರಿದ್ದ ಕಾರು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಲ್ಲಿ ವಂಶಿ ಮತ್ತು ಆಶಿಕ್‌ಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ಗೆಳೆಯ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಬ್ಬರು ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಘಟನೆ ಸಂಬಂಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.