ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಪುಲಕೇಶಿನಗರದ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಯೂಸುಫ್ (19) ಫರಜ್ (19) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಹೊರ ರಾಜ್ಯದ ನಿವಾಸಿಗಳಾಗಿದ್ದು, ಹೊಟೇಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ತಡರಾತ್ರಿ ಬೈಕ್ ನಲ್ಲಿ ಬರುತ್ತಿರುವ ವೇಳೆ ಒನ್ ವೇ ಯಲ್ಲಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಟಿಪ್ಪರ್ ಲಾರಿ ಚಾಲಕ ಸುನೀಲ್ ಎಂಬುವವನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.