ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ.
ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ ನಡೆದಿತ್ತು. ಯುವಕನ ಶವ ಸಿಕ್ಕಿದ್ದು, ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ.