ಸಾಗರಕಟ್ಟೆ ಹಿನ್ನೀರಿನಲ್ಲಿ ಇಬ್ಬರು ಯುವಕರ ಕೊಲೆ

ಹೊಸ ದಿಗಂತ ವರದಿ,ಮೈಸೂರು:

ಜಿಲ್ಲೆ ಕೆ.ಆರ್.ನಗರ ತಾಲೂಕು ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಇಬ್ಬರು ಯವಕರ ಮೃತದೇಹ ಪತ್ತೆಯಾಗಿದೆ.

ಸುಮಾರು 25 ರಿಂದ 30 ವರ್ಷ ವಯಸ್ಸಿನ ಯುವಕರನ್ನು ಕೊಂದು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಕೆರೆಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಓರ್ವನ ಕೈ ಮೇಲೆ ನಾಗರಾಜನ್  ಎಂದು ಅಚ್ಚೆ ಹಾಕಿರುವುದು ಕಂಡು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಮತ್ತು ಡಿವೈಎಸ್ಪಿ ಕರೀಂರಾವತರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ನಗರ ಠಾಣೆ ಪೊಲೀಸರು ಮೃತರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಕೊಲೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!