Friday, June 2, 2023

Latest Posts

ತಿಹಾರ್ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್​​ ಅರೋಗ್ಯದಲ್ಲಿ ಏರುಪೇರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಣ ವರ್ಗಾವಣೆ ಪ್ರಕರಣದಲ್ಲಿ(money-laundering case) ತಿಹಾರ್ ಜೈಲಿನಲ್ಲಿರುವ ಎಎಪಿ (AAP) ನಾಯಕ ಮತ್ತು ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಆರೋಗ್ಯ ಹದಗೆಟ್ಟಿದ್ದು ಅವರನ್ನು ಸೋಮವಾರ ಸಫ್ದರ್​​ಜಂಗ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ.

ಸತ್ಯೇಂದ್ರ ಜೈನ್ ಅವರ ವಕೀಲರು ತಮ್ಮ ಕಕ್ಷಿದಾರರು ತೀವ್ರ ಆರೋಗ್ಯ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದಾರೆ. ಅವರು ಅಸ್ಥಿಪಂಜರವಾಗಿ ಮಾರ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಮಾಜಿ ಸಚಿವರು 35 ಕೆಜಿ ತೂಕ ಕಳೆದುಕೊಂಡು ಅಸ್ಥಿಪಂಜರವಾಗಿದ್ದಾರೆ. ಅವರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಇಡಿಗೆ ನೋಟಿಸ್ ಜಾರಿ ಮಾಡಿದ್ದು, ಪರಿಹಾರಕ್ಕಾಗಿ ರಜಾ ಪೀಠದ ಮುಂದೆ ಹೋಗಲು ಜೈನ್‌ಗೆ ಅನುಮತಿ ನೀಡಿತ್ತು.

ಏಪ್ರಿಲ್ 6 ರಂದು, ದೆಹಲಿ ಹೈಕೋರ್ಟ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೈನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಅವರು ಆಪಾದಿತ ಅಪರಾಧದ ಪರಿಕಲ್ಪನೆ, ಪ್ರಾರಂಭಿಕ ಮತ್ತು ನಿಧಿ ಪೂರೈಕೆದಾರರು ಎಂಬ ಸಾಕ್ಷಿಗಳ ಹೇಳಿಕೆಯನ್ನು ಗಮನಿಸಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017 ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಇಡಿ ಬಂಧಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!