ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಎಇ ನಲ್ಲಿ ನಡೆಯಲಿರುವ ಅಂಡರ್ 19 ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ನವೆಂಬರ್ 29 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ಡಿಸೆಂಬರ್ 8 ರಂದು ನಡೆಯಲಿದೆ.
ಇನ್ನು ಈ ಪಂದ್ಯಾವಳಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್-ಎ ನಲ್ಲಿ ಕಾಣಿಸಿಕೊಂಡಿದೆ. ಅಂದರೆ ಸಾಂಪ್ರದಾಯಿಕ ಎದುರಾಳಿಗಳು ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿದೆ.
ಇನ್ನು ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳು ಸೆಣಸಲಿದೆ. ಹಾಗೆಯೇ ಟೀಮ್ ಇಂಡಿಯಾ ನವೆಂಬರ್ 30 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.