ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ನಲ್ಲಿ ಆರಂಭಗೊಂಡಿದ್ದು, ಭಾರತ ಗೆಲುವಿನ ಶುಭಾರಂಭ ಮಾಡಿದೆ. ಟೀಂ ಇಂಡಿಯಾ, ಅಮೆರಿಕವನ್ನು 6 ವಿಕೆಟ್‌ಗಳಿಂದ ಸೋಲಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ, 35.2 ಓವರ್‌ಗಳಲ್ಲಿ ಕೇವಲ 107 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆ ಬೀರಿತು.
ಭಾರತದ ಇನ್ನಿಂಗ್ಸ್ ಆರಂಭವಾದ ಬಳಿಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಭಾರತ ತಂಡಕ್ಕೆ 96 ರನ್‌ಗಳ ಗುರಿಯನ್ನು ನೀಡಲಾಯಿತು. ಭಾರತದ ಪರ ಅಭಿಗ್ಯಾನ್ ಕುಂಡು ಅಜೇಯ 42 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಅಭಿಗ್ಯಾನ್ ಕುಂಡು ಅವರಿಗಿಂತ ಮೊದಲು, ವೇಗದ ಬೌಲರ್ ಹೆನಿಲ್ ಪಟೇಲ್ ತಂಡದ ಗೆಲುವಿನ ರೂವಾರಿಯಾಗಿದ್ದರು. ಈ ಬಲಗೈ ವೇಗಿ 7 ಓವರ್‌ಗಳಲ್ಲಿ ಕೇವಲ 16 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಈ ಪಂದ್ಯದಲ್ಲಿ 5 ವಿಕೆಟ್ಗಳ ಗೊಂಚಲು ಪಡೆದ ಹೆನಿಲ್ ಪಟೇಲ್, ಬರೋಬ್ಬರಿ 8 ವರ್ಷಗಳ ಬಳಿಕ ಭಾರತೀಯ ಬೌಲರ್ವೊಬ್ಬ ಅಂಡರ್-19 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾದರು.


