U19 World Cup | ಪಾಕ್ ಗೆ ಸೋಲಿನ ರುಚಿ: ಫೈನಲ್‌ ನಲ್ಲಿ ಟೀಮ್ ಇಂಡಿಯಾ- ಆಸ್ಟ್ರೇಲಿಯಾ ಮುಖಾಮುಖಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್‌ ಪಂದ್ಯದಲ್ಲಿ  ಇಂದು ನಡೆದ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ರೋಚಕ ಸೆಮಿಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 1 ವಿಕೆಟ್ನಿಂದ ಮಣಿಸಿದ ಆಸ್ಟ್ರೇಲಿಯಾ ತಂಡ ಫೈನಲ್ ಪ್ರವೇಶಿದೆ.

ಇದರೊಂದಿಗೆ ಪ್ರಶಸ್ತಿ ಸುತ್ತಿನಲ್ಲಿ ಟೀಮ್ ಇಂಡಿಯಾ- ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

ಈ ಪಂದ್ಯಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ್ದ ಭಾರತ ಯುವಪಡೆ ದಾಖಲೆಯ ಒಂಬತ್ತನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿತ್ತು. ಇದೀಗ ಪಾಕಿಸ್ತಾನ ತಂಡವನ್ನು ಮಣಿಸಿರುವ ಆಸ್ಟ್ರೇಲಿಯಾ ತಂಡ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್ಗೆ ಟಿಕೆಟ್ ಪಡೆದುಕೊಂಡಿದೆ.

ಫೆಬ್ರವರಿ 11 ರಂದು ನಡೆಯಲ್ಲಿರುವ ಫೈನಲ್ ಪಂದ್ಯ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!