ಯುಎಇಗೆ ಮೋದಿ: ವಿಮಾನ ನಿಲ್ದಾಣಕ್ಕೆ ಆಗಮಿಸಿ ಸ್ವಾಗತಿಸಿದ ರಾಜಮನೆತನ

ಹೊಸದಿಗಂತ ಆನ್‌ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಜಿ-7 ಶೃಂಗಸಭೆ ಮುಗಿಸಿ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ) ಭೇಟಿ ನೀಡಿದ್ದು, ಅಬುಧಾಬಿಯಲ್ಲಿ ಅವರನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಬಗ್ಗೆ ಟ್ವೀಟ್ ಮಾಡಿರುವ ಅಬುಧಾಬಿಯ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ, ಪ್ರಧಾನಿ ಮೋದಿ ಅವರನ್ನು ಅತ್ಯಂತ ವಿಶೇಷ ರೀತಿಯಲ್ಲಿ, ಹೆಚ್.ಎಚ್. ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ರಾಜಮನೆತನದ ಸದಸ್ಯರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸ್ವಾಗತಿಸಿದರು ಎಂದು ತಿಳಿಸಿದ್ದಾರೆ.

 

ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಹಾಗೂ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಮಹತ್ವದ ಮಾತುಕತೆ ನಡೆಸಿದರಲ್ಲದೆ, ಗಲ್ಫ್ ರಾಷ್ಟ್ರದ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಇದೇ ಸಂದರ್ಭ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!